ಹೇಮಾವತಿ ನಾಲೆಯಲ್ಲಿ ಈಜಲು ಹೋದ ಪಿಯು ವಿದ್ಯಾರ್ಥಿ ನೀರು ಪಾಲು

ಹಾಸನ : ನಾಲೆಯಲ್ಲಿ ಈಜಲು ಹೋಗಿ ಪಿಯು ವಿದ್ಯಾರ್ಥಿ ನೀರುಪಾಲಾದ ಘಟನೆ ಚನ್ನರಾಯಪಟ್ಟಣ ಹೊರವಲಯದ, ನಾಗಸಮುದ್ರ ಬಳಿ ನಡೆದಿದೆ.

ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಶಿವಣ್ಣ ಎಂಬುವವರ ಪುತ್ರ ಪುನೀತ್ (17) ಮೃತಪಟ್ಟ ವಿದ್ಯಾರ್ಥಿ. ಈತ ಚನ್ನರಾಯಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ.

ಮೃತ ಪುನೀತ್

ಭಾನುವಾರ ಕಾಲೇಜಿಗೆ ರಜೆಯಿದ್ದ ಹಿನ್ನೆಲೆಯಲ್ಲಿ ಹೇಮಾವತಿ ಎಡದಂಡೆ ನಾಲೆ ಬಳಿ ತೆರಳಿದ್ದ ಪುನೀತ್ ನಾಲೆಯಲ್ಲಿ ಮೂರ್ನಾಲ್ಕು ಮಂದಿ ಯುವಕರು ಈಜಾಡುತ್ತಿದ್ದನ್ನು ಕಂಡು ನಾಲೆಗೆ ಇಳಿದಿದ್ದ.

ಆದರೆ ಈಜು ಬಾರದ ಹಿನ್ನೆಲೆಯಲ್ಲಿ ಆತ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಷಯ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ ಪುನೀತ್ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.