ಹಾಸನ: ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲೆ ಪಲ್ಟಿಯಾಗಿದ್ದ ಎಲ್ಪಿಜಿ ತುಂಬಿದ್ದ ಬುಲೆಟ್ ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ ಘಟನೆ ಹಾಸನ ಹೊರವಲಯದ ಸಮುದ್ರವಳ್ಳಿ ಬಳಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KA-01 AM-2362 ನಂಬರ್‌ನ ಗ್ಯಾಸ್ ಟ್ಯಾಂಕರ್ ಸಮುದ್ರವಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಯಿತು. ಕೆಲಕಾಲ ಡ್ರೈವಿಂಗ್ ಸೀಟ್‌ನಲ್ಲಿ ಸಿಲುಕಿದ್ದ ಚಾಲಕನನ್ನು ಸ್ಥಳಕ್ಕೆ ಆಗಮಿಸಿದ
ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ
ರಕ್ಷಿಸಿದರು.
ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು. ಪೊಲೀಸರು ಗ್ಯಾಸ್ ಟ್ಯಾಂಕರ್ ತೆರವುಗೊಳಿಸಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.