ಹಾಸನ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

ಹಾಸನ : ಸಕಲೇಶಪುರ ತಾಲೂಕಿನ ಹೆತ್ತೂರು ಗ್ರಾಮದಲ್ಲಿ ಮಾರ್ಚ್ 23 ಮತ್ತು 24ರಂದು ಹಿರಿಯ ಸಾಹಿತಿ ಶೈಲಜಾ ಹಾಸನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ  ಹಾಸನ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಸಮಾರಂಭ ಗ್ರಾಮ ಪಂಚಾಯ್ತಿ ಆವರಣದಲ್ಲಿ ಇಂದು ನಡೆಯಿತು.

ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆಗೊಳಿಸಿದ ನಂತರ ಸ್ಥಳೀಯ ವಾದ್ಯದೊಂದಿಗೆ ಸುಗ್ಗಿ ಕುಣಿತದ ತಂಡದೊಂದಿಗೆ ಶಾಸಕ ಸಿಮೆಂಟ್ ಮಂಜು ಮತ್ತು ಕಸಾಪ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ಗೌಡ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಸಕಲೇಶಪುರ ಆಲೂರು ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಸಮ್ಮೇಳನ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿ ನಾಡು ನುಡಿಗೆ ಸಂಬಂಧಿಸಿದಂತೆ ಗ್ರಾಮೀಣ ಭಾಗದಲ್ಲಿ ಸಮ್ಮೇಳನ ಆಯೋಜನೆಗೊಂಡಿರುವುದು ಸಂಭ್ರಮದ ವಿಚಾರ, ಸಮ್ಮೇಳನ ಯಶಸ್ವಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಹೆಚ್. ಎಲ್. ಮಲ್ಲೇಶ್ ಗೌಡ, ಮಾಜಿ ಅಧ್ಯಕ್ಷ ಹೆಚ್. ಬಿ. ಮದನ್ ಗೌಡ, ಗ್ರಾಮಪಂಚಾಯಿತಿ ಅಧ್ಯಕ್ಷ ನಾಗರಾಜ್, ಪರಿಷತ್ತಿನ ಪದಾಧಿಕಾರಿಗಳಾದ ಬೊಮ್ಮೆಗೌಡ, ಆರ್ ಬಿ ಶಂಕರ್, ಹೆತ್ತೂರು ರವಿ, ಜಾತಹಳ್ಳಿ ಪುಟ್ಟಸ್ವಾಮಿ, ಶಾರದಾ ಗುರುಮೂರ್ತಿ, ಇನ್ನಿತರರು ಇದ್ದರು,