ಹಾಸನ: ರಾಜ್ಯದಲ್ಲಿ ಇಂದೂ ಬೇಸಿಗೆ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿಮೀ ತಲುಪುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಆಲಿಕಲ್ಲು ಮಳೆ ಎಚ್ಚರಿಕೆ: ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.