ಹಾಸನ: ದೇಶದ ಗಮನ ಸೆಳೆದಿದ್ದ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಿಢೀರ್ ಕಾರ್ಯಾಚರಣೆ ನಡೆಸಿದ ಎನ್ಐಎ ಅಧಿಕಾರಿಗಳು ಸಕಲೇಶಪುರದಲ್ಲಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಸುಳ್ಯ ಮೂಲದ ಮುಸ್ತಾಫ್ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್ ಅವರನ್ನು ಸಕಲೇಶಪುರ ತಾಲ್ಲೂಕಿನ, ಆನೆಮಹಲ್‌ನಲ್ಲಿ ಎನ್‌ಐಎ ತಂಡ ವಶಕ್ಕೆ ಪಡೆದಿದೆ.
ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದ ಪ್ರಕರಣದ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫಾ ಪೈಚಾರ್ ಹಾಗೂ ಇಲಿಯಾಸ್ ಹಾಗೂ ಅವರಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್ ನನ್ನು ತಂಡ ವಶಕ್ಕೆ ಪಡೆದು ಕರೆದೊಯ್ದಿದೆ.