ಹಾಸನ: ಆಲೂರು ತಾಲ್ಲೂಕಿನ ಕಟ್ಟೆಪುರ ಗ್ರಾಮದ ಬಳಿಯ ಹೇಮಾವತಿ ನದಿಯಲ್ಲಿ ಕಾಡಾನೆಗಳ ಹಿಂಡು ಜಲಕ್ರೀಡೆಯಾಡಿರುವ ದೃಶ್ಯ ಸ್ಥಳೀಯರ ಗಮನ ಸೆಳೆದಿದೆ.
ದೊಡ್ಡಬೆಟ್ಟ ಮೀಸಲು ಅರಣ್ಯದಲ್ಲಿ ಬೀಡುಬಿಟ್ಟಿದ್ದ ಗಜಪಡೆ, ಕೆಲಕಾಲ ನದಿಯಲ್ಲಿ ಆಟವಾಡಿ, ಮಿಂದೆದ್ದು ಮನರಂಜನೆಯ ದೃಶ್ಯವನ್ನು ಸೃಷ್ಟಿಸಿತು.
ಘಟನೆಯ ಸಂಪೂರ್ಣ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಆನೆಗಳು ನದಿಯಲ್ಲಿ ಆಟವಾಡಿದ ನಂತರ, ಹೇಮಾವತಿ ನದಿಯನ್ನು ದಾಟಿ ಕಟ್ಟೆಪುರ ಅರಣ್ಯ ಪ್ರದೇಶಕ್ಕೆ ತೆರಳಿವೆ.
ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.