ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಸಚಿವ ಜಮೀರ್ ಅಹಮದ್ ಆಪ್ತ ನವೀನ್‌ಗೌಡ ನಿವಾಸದ ಮೇಲೂ ಎಸ್ಐಟಿ ದಾಳಿ ನಡೆಸಿದೆ.
ಬೇಲೂರಿನ ತಾಲ್ಲೂಕಿನ, ನೆಲ್ಕೆ ಗ್ರಾಮದಲ್ಲಿರುವ ನವೀನ್‌ಗೌಡ ನಿವಾಸದ ಮೇಲೂ ಎಸ್‌ಐಟಿ ಅಧಿಕಾರಿಗಳಿಂದ ದಾಳಿ ನಡೆದಿದ್ದು, ಪೆನ್‌ಡ್ರೈವ್ ಹಂಚಿದ ಸಂಬಂಧ ಸಾಕ್ಷ್ಯ ಸಂಗ್ರಹಿಸಲಾಗುತ್ತಿದೆ.
ಪೆನ್‌ಡ್ರೈವ್ ಹಂಚಿಕೆ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್‌ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಈಗಾಗಲೇ ವಿಚಾರಣೆಗೆ ಹಾಜರಾಗಲು ಎಸ್ಐಟಿ ನೋಟಿಸ್ ನೀಡಿದೆ.