ಹಾಸನ: ಸಂಸದ ಪ್ರಜ್ವಲ್‌ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ಸಂಬಂಧ ನಿನ್ನೆ ಹದಿನೆಂಟು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಎಸ್ಐಟಿ ಮುಂಜಾನೆ 3.30 ರವರೆಗೂ ಶೋಧಕಾರ್ಯ ನಡೆಸಿದೆ.
ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಕ್ವಾಲಿಟಿ ಬಾರ್ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್‌ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ಎಸ್ಐಟಿ ತಂಡಗಳು ಪ್ರತ್ಯೇಕವಾಗಿ ದಾಳಿ ನಡೆಸಿದ್ದವು.
ಕ್ವಾಲಿಟಿ ಬಾರ್ ಶರತ್ ಅವರ ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲಾಟ್ ಮೇಲೂ ದಾಳಿ ಮಾಡಿದ್ದ ಎಸ್‌ಐಟಿ ಟೀಂ ಶರತ್ ಅವರ ಐಫೋನ್ ಅನಮಾತುಪಡಿಸಿಕೊಂಡು ಪರಿಶೀಲಿಸಿದೆ. ಆದರೆ ಅವರ ಮನೆಯಲ್ಲಿ ಕೇಸಿಗೆ ಉಪಯುಕ್ತ ದಾಖಲಾತಿ, ಎಲೆಕ್ಟ್ರಾನಿಕ್ ವಸ್ತುಗಳು ದೊರಕಿಲ್ಲ ಎಂದು ಎಸ್ಐಟಿ ಶೋಧನಾ ಪಂಚನಾಮೆಯಲ್ಲಿ ಹೇಳಿದೆ.
ವಿವಿಧೆಡೆಯ ದಾಳಿಗಳಿಂದ ಎಸ್ಐಟಿ ತಂಡಗಳು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನು ವಶಪಡಿಸಿಕೊಂಡು ಹೊರಟಿವೆ.