ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡ ಇಂದು ಮಧ್ಯಾಹ್ನವೇ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ.
ನಿಯಮ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಸುತ್ತಿರುವ ಎಸ್.ಐ.ಟಿ. ತಂಡ ತನಿಖೆಗೆ ಇಳಿಯಲಿದೆ.
ಸಿಐಡಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ಎಸ್.ಐ.ಟಿ. ಮುಖ್ಯಸ್ಥರಾಗಿದ್ದು ಈ ಹಿಂದೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ನಡೆಸಿದ ಎಸ್.ಐ.ಟಿ. ಮುಖ್ಯಸ್ಥರಾಗಿದ್ದರು.