ಹಾಸನ : ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ, ಗೌಡಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಘಟನೆ ಗುರುವಾರ ರಾತ್ರಿ ನಡೆದಿದೆ.
ಹದಿನಾಲ್ಕು ಮಂದಿ ಪ್ರಯಾಣಿಕರಿದ್ದ ಸಕಲೇಶಪುರ ಘಟಕಕ್ಕೆ ಸೇರಿದ KA-18 F-0837 ನಂಬರ್‌ನ ಸಾರಿಗೆಬಸ್ ಬೆಂಗಳೂರಿನಿಂದ ಹಾಸನದ ಕಡೆಗೆ ಬರುತ್ತಿತ್ತು.
ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಗೆ ಪಲ್ಟಿಯಾಗಿದೆ.
ಬಸ್‌ನಲ್ಲಿದ್ದ ಪ್ರಯಾಣಿಕರ ಪೈಕಿ ನಾಲ್ವರು ಪ್ರಯಾಣಿಕರಿಗೆ ಗಾಯಗೊಂಡಿದ್ದು, ಅವರನ್ನು ಅಂಬ್ಯುಲೆನ್ಸ್‌ನಲ್ಲಿ ಚನ್ನರಾಯಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.