ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ನಗರದಲ್ಲಿ ವಾಸವಿದ್ದ ಮೂವರು ಬಾಂಗ್ಲಾದೇಶಿ ಪ್ರಜೆಗಳನ್ನು ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಬಂಧಿತ ಬಾಂಗ್ಲಾ ಪ್ರಜೆಗಳು.
ನಗರದ 80 ಅಡಿ ರಸ್ತೆ ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬುವವರ ಮನೆಯಲ್ಲಿ ವಾಸವಿದ್ದ ಮೂವರು ಜುಬೇರ್ ಮನೆ ಕಟ್ಟಡ ಕಾಮಗಾರಿಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ಪಶ್ಚಿಮಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಪಡೆದಿದ್ದ ನುಸುಳುಕೋರರು ಅಲ್ಲಿನ ನಿವಾಸಿಗಳು ಎಂಬಂತೆ ಮೂವರೂ ನಕಲಿ ಆಧಾರ್ ಕಾರ್ಡ್ ಹೊಂದಿದ್ದಾರೆ.
ಮೂವರ ವಿರುದ್ಧವೂ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಅಕ್ರಮ ನುಸುಳುಕೋರರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.