ಹಾಸನ: ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು ಇಂದಿಗೆ ಹತ್ತನೇ ದಿನ ಪೂರೈಸುತ್ತಿದ್ದು, ಸಾರ್ವಜನಿಕ ದರ್ಶನದ ಕಡೆಯ ದಿನವೂ ಮುಂಜಾನೆಯಿಂದಲೇ ಭಕ್ತರ ದಂಡು ಹರಿದು ಬರುತ್ತಿದೆ.
ಸಹಸ್ರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಇಂದು ಮುಂಜಾನೆ 3 ಗಂಟೆಯಿಂದ ನಿರಂತರ ದರ್ಶನವಿದ್ದು, ಸಂಜೆ 7 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನೈವೇದ್ಯಕ್ಕಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು.
ರಾತ್ರಿ 11 ಗಂಟೆಯಿಂದ ನಾಳೆ ಬೆಳಿಗ್ಗೆ 7 ಗಂಟೆಯವರೆಗೆ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶವಿದ್ದು,ಧರ್ಮದರ್ಶನದ ಸಾಲುಗಳು ಭರ್ತಿಯಾಗಿವೆ. 1000 ರೂ, 300 ರೂ. ವಿಶೇಷ ದರ್ಶನದ ಸಾಲಿನಲ್ಲೂ ಭಕ್ತಗಣ ತುಂಬಿದೆ.
ನಾಳೆ ಮ.12 ಗಂಟೆ ನಂತರ ವಿಶ್ವರೂಪ ದರ್ಶನದ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಾಗುವುದು. ಆ ಮೂಲಕ ಈ ವರ್ಷದ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಬೀಳಲಿದೆ ವಿದ್ಯುಕ್ತ ತೆರೆ ಬೀಳಲಿದೆ.