ಯಡಕುಮರಿ ರೈಲ್ವೆ ಹಳಿ ಮೇಲೆ ಭೂ ಕುಸಿತ; ಯಾವ ರೈಲು ಸಂಚಾರ ರದ್ದು? ಯಾವ ರೈಲುಗಳ ಮಾರ್ಗ ಬದಲಾವಣೆ? ಇಲ್ಲಿದೆ ಮಾಹಿತಿ

ಮೈಸೂರು: ಮೈಸೂರು ವಿಭಾಗದ ಯಡಕುಮರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದ ಕಾರಣ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗಿದೆ/ ಮಾರ್ಗ ಬದಲಾಯಿಸಲಾಗಿದೆ.

1.ದಿನಾಂಕ 26.07.2024ರಂದು ಹೊರಡುವ ರೈಲು ಸಂಖ್ಯೆ 06568 ಕಾರವಾರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದುಪಡಿಸಲಾಗಿದೆ.

2.ದಿನಾಂಕ 26.07.2024ರಂದು ಹೊರಡುವ ರೈಲು ಸಂಖ್ಯೆ 16595 ಕ್ರಾ.ಸಂ.ರಾ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆಗೊಂಡು ಕುಣಿಗಲ್,ಪಡೀಲು ಬೈಪಾಸ್ ಬದಲು ಯಶವಂತಪುರ, ಬಾನಸವಾಡಿ, ಜೋಲಾರ್ಪೇಟೆ ಕ್ಯಾಬಿನ್, ಸೇಲಂ, ಪೊದನೂರು, ಶೋರನೂರು, ಮಂಗಳೂರು ಜಂಕ್ಷನ್, ಸುರತ್ಕಲ್ ಮೂಲಕ ಓಡಲಿದೆ.

3.ದಿನಾಂಕ 26.07.2024ರಂದು ಹೊರಡುವ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್ – ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆಗೊಂಡು ಹಾಸನ ಬದಲು ಸುಬ್ರಹ್ಮಣ್ಯ ರಸ್ತೆ, ಪಡೀಲ್, ಸುರತ್ಕಲ್, ಕಾರವಾರ, ಮಡಗಾಂವ್, ಕೂಲಂ, ಕ್ಯಾಸ್ಟಲ್ ರಾಕ್, ಲೊಂಡಾ, ಶ್ರೀ ಸಿದ್ಧರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮೂಲಕ ಓಡಲಿದೆ.

4.ದಿನಾಂಕ 26.07.2024ರಂದು ಹೊರಡುವ ರೈಲು ಸಂಖ್ಯೆ 16586 ಮುರಡೇಶ್ವರ–ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಮಾರ್ಗ ಬದಲಾವಣೆಗೊಂಡು ಹಾಸನ,ಮೈಸೂರು ಬದಲು ಮಂಗಳೂರು ಜಂಕ್ಷನ್, ಶೋರನೂರು, ಸೇಲಂ, ಜೋಲಾರ್ಪೇಟೆ ಕ್ಯಾಬಿನ್ ಮೂಲಕ ಓಡಲಿದೆ.

5.ದಿನಾಂಕ 26.07.2024ರಂದು ಹೊರಡುವ ರೈಲು ಸಂಖ್ಯೆ 16512 ಕಣ್ಣೂರು–ಕ್ರಾ.ಸಂ.ರಾ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಕುಣಿಗಲ್ ಬದಲು ಮಂಗಳೂರು ಸೆಂಟ್ರಲ್, ಶೋರನೂರು, ಸೇಲಂ, ಜೋಲಾರ್ಪೇಟೆ ಕ್ಯಾಬಿನ್ ಮೂಲಕ ಓಡಲಿದೆ.

6.ದಿನಾಂಕ 26.07.2024ರಂದು ಹೊರಡುವ ರೈಲು ಸಂಖ್ಯೆ 16596 ಕಾರವಾರ-ಕ್ರಾ.ಸಂ.ರಾ ಬೆಂಗಳೂರು ಪಂಚಗಂಗಾ ಎಕ್ಸ್‌ಪ್ರೆಸ್ ಪಡೀಲು ಬೈಪಾಸ್ ಬದಲು ಮಂಗಳೂರು ಜಂಕ್ಷನ್, ಶೋರನೂರು, ಸೇಲಂ, ಜೋಲಾರ್ಪೇಟೆ ಕ್ಯಾಬಿನ್ ಮೂಲಕ ಓಡಲಿದೆ.

7.ರೈಲು ಸಂಖ್ಯೆ 16511 ಕ್ರಾ.ಸಂ.ರಾ ಬೆಂಗಳೂರು–ಕಣ್ಣೂರು ಎಕ್ಸ್‌ಪ್ರೆಸ್ ಕುಣಿಗಲ್ ಬದಲು ಜೋಲಾರ್ಪೇಟೆ ಕ್ಯಾಬಿನ್, ಸೇಲಂ, ಶೋರನೂರು, ಮಂಗಳೂರು ಜಂಕ್ಷನ್ ಮೂಲಕ ಓಡಲಿದೆ.

8.ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು–ಮುರಡೇಶ್ವರ ಎಕ್ಸ್‌ಪ್ರೆಸ್ 26.07.2024 ರ ರಾತ್ರಿ ಹೊರಟಿರುವುದು ಕ್ರಾ.ಸಂ.ರಾ ಬೆಂಗಳೂರು, ಜೋಲಾರ್ಪೇಟೆ ಕ್ಯಾಬಿನ್, ಶೋರನೂರು, ಮಂಗಳೂರು ಜಂಕ್ಷನ್ ಮೂಲಕ ಓಡಲಿದೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.