ಹಾಸನ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ ರಸ್ತೆಯ ದೊಡ್ಡತಪ್ಪಲೆಯಲ್ಲಿ ಬೆಳಗಿನ ಜಾವ ಓಮ್ನಿ ಕಾರಿನ ಮೇಲೆ ಗುಡ್ಡ ಕುಸಿತ ಪ್ರಕರಣದಲ್ಲಿ ರಸ್ತೆ ನಿರ್ಮಾಣ ಸಂಸ್ಥೆಯ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ಬಿಹಾರ ಮೂಲದ ಅಖಿಲೇಶ್ ಹಾಗೂ ಶರತ್ ಎಂಬುವರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಹಿಮ್ಸ್ ಗೆ ದಾಖಲಿಸಲಾಗಿದೆ.
ಓಮ್ನಿ ಮೇಲೆ ಗುಡ್ಡ ಕುಸಿದ ಘಟನೆ ವಿಷಯ ತಿಳಿದು ಮುಂಜಾನೆ ಸ್ಥಳಕ್ಕೆ ಬಂದಿದ್ದ ರಸ್ತೆ ಕಾಮಗಾರಿ ನಿರ್ವಹಿಸುತ್ತಿರುವ ಕಂಪನಿಯ ಸಿಬ್ಬಂದಿ ಕಾರಿನಲ್ಲಿದ್ದವರನ್ನು ವಿಚಾರಿಸುತ್ತಿದ್ದ ವೇಳೆ ಭೂಕುಸಿತ ಉಂಟಾಗಿದೆ. ಅವರ ಮೇಲೂ ಕಲ್ಲು,ಮಣ್ಣು ಬಿದ್ದಿದ್ದು ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.