ಕಾಫಿ ಕೊಯ್ಲು ಮಾಡುತ್ತಿದ್ದವರ ಮೇಲೆ ಕಾಡಾನೆ ದಾಳಿ; ಇಬ್ಬರು ಮಹಿಳೆಯರಿಗೆ ಗಾಯ| Elephant

ಹಾಸನ: ಜಿಲ್ಲೆಯಲ್ಲಿ ಕಾಡಾನೆ-ಮಾನವ ಸಂಘರ್ಷ ಮಿತಿ ಮೀರಿದ್ದು ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಸಿರಗುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮಹಿಳಾ ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.

 ಜಯಂತಿ (47) ಮತ್ತು ಶಬಾನ (45) ಎಂದು ಗಾಯಗೊಂಡಿದ್ದಾರೆ. ಕಾಫಿ ಕೊಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ಆನೆ ದಾಳಿ ನಡೆದಿದ್ದು, ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ  ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈ ಘಟನೆ ಸಿರಗುರದ ಕೆ.ಇ.ಎಂ.ಎಸ್. ಕಾಫಿ ತೋಟದಲ್ಲಿ ಸಂಭವಿಸಿದೆ. ಕಾಫಿ ಕೊಯ್ಲಿಗೆ ತೆರಳಿದ್ದ ಕೂಲಿ ಕಾರ್ಮಿಕರ ಮೇಲೆ ಏಕಾಏಕಿ ದಾಳಿ ಮಾಡಿದ ಒಂಟಿ ಕಾಡಾನೆ, ಜಗಳ ಸೃಷ್ಟಿಸಿತು.

ಕಾಫಿ ಕೊಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆದಿದ್ದು, ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮೊದಲನೇ ಪ್ರಾಥಮಿಕ ಚಿಕಿತ್ಸೆಯನ್ನು ಬೇಲೂರು ತಾಲ್ಲೂಕು ಆಸ್ಪತ್ರೆಯಲ್ಲಿ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ

ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ಕಾಡಾನೆ ದಾಳಿ ತಡೆಯಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ ವ್ಯಕ್ತವಾಗಿದೆ.