ವಿಡಿಯೋ: ಬೆಂಕಿ ಹೊತ್ತಿಕೊಂಡು ಭಸ್ಮವಾದ ಗೂಡ್ಸ್ ಲಾರಿಗಳು

ಹಾಸನ, ಫೆಬ್ರವರಿ 1: ಬೇಲೂರಿನ ನೆಹರು ನಗರದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಎರಡು ಗೂಡ್ಸ್ ಲಾರಿಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿವೆ.

ಈ ಘಟನೆ ತಹಸೀಲ್ದಾರ್ ಕಚೇರಿ ಹಿಂಭಾಗದಲ್ಲಿರುವ ಖಾಸಗಿ ಶಾಲೆಯ ಆವರಣದಲ್ಲಿ ಸಂಭವಿಸಿದೆ. ಮಾಹಿತಿ ದೊರಕಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರು.

ಆದರೆ, ಆಗಲೇ ಲಾರಿಗಳು ಸಂಪೂರ್ಣ ಭಸ್ಮವಾಗದ್ದವು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. .