ಚನ್ನರಾಯಪಟ್ಟಣದಲ್ಲಿ ಪುಡಿರೌಡಿಗಳ ಅಟ್ಟಹಾಸ; ಹಾಡುಹಗಲೇ ಅಂಗಡಿಗೆ ನುಗ್ಗಿ ಗಲ್ಲಾಪೆಟ್ಟಿಗೆ ದೋಚಿದರು

ಹಾಸನ: ನಂಬರ್ ಪ್ಲೇಟ್ ಇಲ್ಲದ ಬೈಕ್ ಬಂದ ಪುಡಿ ರೌಡಿಗಳಿಬ್ಬರು ಹಾಡು ಹಗಲೇ ಅಂಗಡಿಗೆ ನುಗ್ಗಿ 28 ಸಾವಿರ ರೂ. ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕು ಬಾಗೂರು ರಸ್ತೆಯಲ್ಲಿ ನಡೆದಿದೆ.

ಬಾಗೂರು ರಸ್ತೆಯ ಶನಿದೇವರ ದೇವಸ್ಥಾನದ ಬಳಿ ಎಳನೀರು ಹೋಲ್‌ಸೇಲ್ ಮಾರಾಟ ಮಳಿಗೆ ಇಟ್ಟುಕೊಂಡಿರುವ ರಮೇಶ್ ಎಂಬವರ ಅಂಗಡಿಯಲ್ಲಿ ದುಷ್ಕೃತ್ಯ ನಡೆದಿದೆ.

ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಏಕಾಏಕಿ ಅಂಗಡಿಗೆ ನುಗ್ಗಿ ಕ್ಯಾಶ್ ಕೌಂಟರ್ ನಲ್ಲಿ ಇಟ್ಟಿದ್ದ 28 ಸಾವಿರ ಹಣ ತೆಗೆದುಕೊಂಡು ಪರಾರಿಯಾಗಿದ್ದಾರೆ.

ಚನ್ನರಾಯಪಟ್ಟಣ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಚನ್ನರಾಯಪಟ್ಟಣದಲ್ಲಿ ಸರಗಳ್ಳತನ, ಮನೆಗಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ಸಾರ್ವಜನಿಕರು ಭಯಭೀತರಾಗಿದ್ದಾರೆ.