ಭೂಕುಸಿತ; ಯಾವೆಲ್ಲ ರೈಲುಗಳ ಸಂಚಾರ ರದ್ದಾಗಿದೆ? ಇಲ್ಲಿದೆ ಮಾಹಿತಿ

ಹಾಸನ: ಸಕಲೇಶಪುರ ಮತ್ತು ಬಾಳ್ಳುಪೇಟೆ ನಡುವೆ ಭೂಕುಸಿತದಿಂದಾಗಿ ಬೆಂಗಳೂರು-ಮಂಗಳೂರು ನಡುವಿನ ಎರಡು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ರೈಲು ಸಂಚಾರ ರದ್ದು;

1. ಆ. 11‌ರಂದು ಸಂಚರಿಸಬೇಕಿದ್ದ ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್- ಯಶವಂತಪುರ ಜಂಕ್ಷನ್ ಎಕ್ಸ್‌ಪ್ರೆಸ್ ಸಂಚಾರ ರದ್ದುಗೊಳಿಸಲಾಗಿದೆ.

ಸಂಚಾರ ಮೊಟುಕು:

1. ಇಂದು ಸಂಚರಿಸುವ ರೈಲು ಸಂಖ್ಯೆ 16539 ಯಶವಂತಪುರ ಜಂಕ್ಷನ್- ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ರೈಲು ಚನ್ನರಾಯಪಟ್ಟಣದವರೆಗೆ ಮಾತ್ರ ಸಂಚರಿಸಲಿದೆ. ಚನ್ನರಾಯಪಟ್ಟಣ ಮತ್ತು ಮಂಗಳೂರು ಜಂಕ್ಷನ್ ನಡುವಿನ ಸಂಚಾರ ರದ್ದುಗೊಳಿಸಲಾಗಿದೆ.