ಹಾಸನ ವಿಶ್ವವಿದ್ಯಾಲಯ ಬಂದ್ ವಿರೋಧಿಸಿ ವಿದ್ಯಾರ್ಥಿಗಳು, ಉಪನ್ಯಾಸಕರ ಪ್ರತಿಭಟನೆ

ಹಾಸನ: ಹಾಸನ ವಿಶ್ವವಿದ್ಯಾಲಯವನ್ನು ಬಂದ್ ಮಾಡುವ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇಂದು ಪ್ರತಿಭಟನೆ ನಡೆಸಿದರು.

ತರಗತಿ ಬಹಿಷ್ಕಾರ, ಧರಣಿ
ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿಯಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಧರಣಿ ನಡೆಸಿದರೆ, ಉಪನ್ಯಾಸಕರು ಕೂಡ ಈ ಪ್ರತಿಭಟನೆಯಲ್ಲಿ ಭಾಗವಹಿಸಿದರು.

ಸರ್ಕಾರದ ವಿರುದ್ಧ ಘೋಷಣೆ
ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಹಾಸನ ವಿಶ್ವವಿದ್ಯಾಲಯವನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಒತ್ತಾಯಿಸಿದರು. ವಿಶ್ವವಿದ್ಯಾಲಯ ಬಂದ್ ಮಾಡಿದರೆ ಉಗ್ರ ಹೋರಾಟ ನಡೆಯಲಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.