ಎಂಎಲ್‌ಸಿ ಡಾ.ಸೂರಜ್‌ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಲು ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ಬಂದ ಸಂತ್ರಸ್ತ

ಶೀಘ್ರವೇ ಎಫ್ಐಆರ್ ದಾಖಲು ನಿರೀಕ್ಷೆ

ಹಾಸನ: ಎಂಎಲ್‌ಸಿ ಡಾ.ಸೂರಜ್‌ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತ ಯುವಕ ದೂರು ದಾಖಲಿಸಲು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ದು ಶೀಘ್ರವೇ ಎಫ್ಐಆರ್ ದಾಖಲಾಗುವ ಸಾಧ್ಯತೆ ಇದೆ.

ಡಾ.ಸೂರಜ್‌ರೇವಣ್ಣ ವಿರುದ್ಧ ದೂರು ನೀಡಲು ಸಂತ್ರಸ್ತ ಆಗಮಿಸಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಒಂದು ಕೆಎಸ್‌ಆರ್‌ಪಿ ತುಕಡಿಯನ್ನೇ ನಿಯೋಜಿಸಲಾಗಿದೆ.

ಸೂಕ್ಷ್ಮ ಪ್ರಕರಣವಾಗಿರುವ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಎಎಸ್‌ಪಿ ವೆಂಕಟೇಶ್ ನಾಯ್ಡು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲೇ ಹಾಜರಿದ್ದಾರೆ.