ಬಾಳ್ಳುಪೇಟೆ ಗ್ರಾಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಪ್ರತಿಭಟನೆ

ಹಾಸನ; ಕರವಸೂಲಿ ಹಣ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಸಕಲೇಶಪುರ ತಾಲೂಕು ಬಾಳ್ಳುಪೇಟೆಯಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರು, ಅಭಿವೃದ್ಧಿ ಅಧಿಕಾರಿ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು.

ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆಗಮಿಸುವವರೆಗೂ ಹೋರಾಟ ನೆಡೆಸುವುದಾಗಿ ಪ್ರತಿಭಟನೆಕಾರರು ಬಿಗಿಪಟ್ಟು ಹಿಡಿದು ಕುಳಿತಿದ್ದಾರೆ.

ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.