ಹಾಸನ ಕ್ಷೇತ್ರದಲ್ಲಿ ಈ ಬಾರಿ ಇತಿಹಾಸದಲ್ಲೇ ಅತೀ ಹೆಚ್ಚು ಮತದಾನ!

ಹಾಸನ: ಹಾಸನ ಲೋಕಾಸಭಾ ಕ್ಷೇತ್ರದ ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಹಾಸನ ಲೋಕಸಭೆ
ಚುನಾವಣೆ ಇತಿಹಾಸದಲ್ಲೇ ಅತ್ಯಧಿಕ ಮತದಾನ ನಡೆದಿದೆ.

ಹಾಸನ ಕ್ಷೇತ್ರದಲ್ಲಿ ಶೇ.77.42 ಮತದಾನ ಆಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಅಲ್ಪ ಪ್ರಮಾಣದಲ್ಲಿ ಮತದಾನ ಹೆಚ್ಚಾಗಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಶೇ.77.35 ಮತದಾನ ಆಗಿತ್ತು. ಕೆಲವು ಸಣ್ಣಪುಟ್ಟ ಘಟನೆ ಹೊರತುಪಡಿಸಿ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಚುನಾವಣೆ ಮುಕ್ತಾಯವಾಗಿದೆ.