ಹಾಸನ: ನಮ್ಮ ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ ಹಾಗೂ ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎನ್ನುವುದು ನನ್ನ ನಂಬಿಕೆ ಎಂದು ಮಾಜಿಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಲೋಕಸಭಾ ಚುನಾವಣೆ ಬಳಿಕ ಸಿಎಂ ಬದಲಾವಣೆಯಾಗುತ್ತಾರೆ ಎನ್ನುವುದೆಲ್ಲ ಊಹಾಪೋಹಗಳು, ಆ ರೀತಿ ಏನೂ ಇಲ್ಲ ಎಂದರು.
ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂಬ ಕೆಲ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಸರ್ಕಾರ ಇದ್ದಾಗಲೂ ಕೂಡ ಆ ರೀತಿ ಇದ್ದೇ ಇರುತ್ತೆ. ಬಿಜೆಪಿ ಸರ್ಕಾರ ಇದ್ದಾಗ ಎಷ್ಟೋ ಜನ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದರು. ಅವರ ಬೆಂಬಲಿಗರು ಕೂಡ ಮಾತನಾಡಿದ್ದರು.
ಒಂದು ಸ್ಥಿರವಾದ ಸರ್ಕಾರ ಕೊಡಬೇಕಿರುವುದು ಎಲ್ಲಾ ಪಕ್ಷಗಳ ಜವಾಬ್ದಾರಿ. ನಮ್ಮ ಕಾಂಗ್ರೆಸ್ ಪಕ್ಷ ಕೂಡ ಅದಕ್ಕೆ ಬದ್ಧವಾಗಿರುತ್ತೆ ಎಂದರು. ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂಬುದು ನನ್ನ ನಂಬಿಕೆ ಎಂದು ಹೇಳಿದರು.